ಕಾರವಾರ: ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಜಿಲ್ಲೆಯ ನೂತನ ಡಿಸಿಯಾಗಿ ನಿಯೋಜಿಸಲಾಗಿದೆ.
ಹರೀಶ್ ಕುಮಾರ್ ನಂತರ ಉತ್ತರ ಕನ್ನಡಕ್ಕೆ ಡಿಸಿಯಾಗಿ ಆಗಮಿಸಿದ್ದ ಮುಲೈ ಮುಗಿಲನ್ ಅವರು, ಸರಳ ವ್ಯಕ್ತಿತ್ವ ಹಾಗೂ ಉತ್ತಮ ಆಡಳಿತಗಾರರಾಗಿದ್ದರು. ಪ್ರವಾಹ ಹಾಗೂ ಕೋವಿಡ್ ಸಮಯದಲ್ಲಿ ಮುಲೈ ಮುಗಿಲನ್ ಕಾರ್ಯವನ್ನು ಜಿಲ್ಲೆಯ ಜನ ನೆನಪಿಟ್ಟುಕೊಳ್ಳುವಂತೆ ಮಾಡಿದ್ದು, ಇದೀಗ ಅವರ ದಿಡೀರ್ ವರ್ಗಾವಣೆ ಜಿಲ್ಲೆಯ ಜನರಿಗೆ ಬೇಸರ ಮೂಡಿಸುವಂತಿದೆ.
ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಪ್ರಭುಲಿಂಗ ಕವಳಿಕಟ್ಟಿ ಅವರು 2013ನೇ ಬ್ಯಾಚ್‌ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.