ಬಾಗೇಪಲ್ಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ದಾಖಲೆಗಳ ಪರಿಶೀಲನೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರ್.ಟಿ.ಓ ಇನ್ಸಪೇಕ್ಟರ್ ಮಹಾದೇವಪ್ಪ ಹಾಗೂ ಸಿಬ್ಬಂದಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಬಾಗೇಪಲ್ಲಿ ಆರ್.ಟಿ.ಓ ಚೆಕ್ ಪೋಸ್ಟ್ ನಲ್ಲಿ ವಾಹನಗಳ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು. ಇದರ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ದಾಳಿ ವೇಳೆ ಲೋಕಾ ಅಧಿಕಾರಿಗಳು ದಾಖಲೆಗಳ ಜೊತೆ ನಗದು ಹಣ ಪರಿಶೀಲಿಸುತ್ತಿದ್ದಾರೆ.