ಚಾಮರಾಜನಗರ: ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ಶನಿವಾರ ಸಂಜೆ ನಡೆದಿದೆ.
ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯೋರ್ವಳು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.