ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ.?!

ಬೆಂಗಳೂರು: ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು, ದೀಪಾವಳಿ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ದೀಪಾವಳಿ ಹಬ್ಬ ಮುಗಿದ ಮೇಲೆ ಸಿಎಂ ದೆಹಲಿಗೆ ಬರಲಿದ್ದು, ಆ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು. ಸಿಎಂ ಜೊತೆ ಚರ್ಚೆ ನಡೆಸಿದ ಬಳಿಕ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಭೇಟಿ ಮಾಡಿ ಮಾತಾನಾಡುವುದಾಗಿ ಹೇಳಿ, ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆಯ ಸುಳಿವು ನೀಡಿದ್ದಾರೆ.