ಬೆಂಗಳೂರು: ದೀಪಾವಳಿಯ ಮೊದಲ ದಿನವೇ ಪಟಾಕಿಯಿಂದ 12 ಮಂದಿ ಗಾಯಗೊಂಡಿದ್ದು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬಿಜಿಲಿ ಹಾಗೂ ಲಕ್ಷ್ಮೀ ಪಟಾಕಿಯಿಂದಲೇ ಹೆಚ್ಚು ಜನರಿಗೆ ಗಾಯಗಳಾಗಿರುವುದು ತಿಳಿದು ಬಂದಿದೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾಗೆ ಪಟಾಕಿ ಸಿಡಿದು ಗಾಯಗಳಾಗಿವೆ. ನಿನ್ನೆ ಸಂಜೆ ಆದ ಮೇಲೆ ಪಟಾಕಿ ಅವಘಡ ಪ್ರಕರಣಗಳು ಹೆಚ್ಚಾಗಿವೆ.