ಬೆಂಗಳೂರು: ರಾಜ್ಯದಾದ್ಯಂತ ಶೀಘ್ರವೇ 438 ‘ನಮ್ಮ ಕ್ಲಿನಿಕ್’ ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಕುರಿತು ಸದಾಶಿವ ನಗರದಲ್ಲಿ ಸಚಿವರು ಮಾತನಾಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ರಾಜ್ಯಾಧ್ಯಂತ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ. 438 ನನ್ನೂರ ನಮ್ಮ ಕ್ಲಿನಿಕ್ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು.
ನಗರಸಭೆ ಹಾಗೂ ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಥಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕೆಳಗಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಹಿತರಕ್ಷಣೆ ದೃಷ್ಟಿಯಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. ಇನ್ನೂ ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ಆರೋಗ್ಯ ಕೇಂದ್ರಗಳಲ್ಲಿ 128 ‘ಮಹಿಳಾ ಸ್ವಾಸ್ತ್ಯ ಕೇಂದ್ರ’ವನ್ನು ತೆರೆಯಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.