ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನ. 1 ರಂದು ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ವಿಧಾನಸೌಧದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಗೌರವ ಸಲ್ಲಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ವತಿಯಿಂದ ಜ್ಯೂ.ಎನ್ ಟಿ ಆರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಜ್ಯೂ. ಎನ್ ಟಿ ಆರ್ ಒಪ್ಪಿದ್ದಾರೆ. ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಸರ್ಕಾರ ಆಹ್ವಾನ ನೀಡಿದೆ. ಆದರೆ ಅವರ ಆಗಮನದ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ. ಇನ್ನು ಪುನೀತ್ ರಾಜ್ ಕುಮಾರ್ ಅವರಿಗೆ ನೀಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪು ಬದಲಾಗಿ ಅವರ ಪತ್ನಿ ಅಶ್ವಿನಿ ಸ್ವೀಕರಿಸಲಿದ್ದಾರೆ.