ಗುಜರಾತ್: ಮೊರ್ಬಿ ನಗರದ ತೂಗು ಸೇತುವೆ ಕುಸಿದು 140 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾವುಕ ನುಡಿಗಳನ್ನಾಡಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿ ಸೇತುವೆ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಎಲ್ಲಾ ರೀತಿಯಲ್ಲೂ ದುಃಖಿತ ಕುಟುಂಬಗಳೊಂದಿಗೆ ಇದೆ. ನಿನ್ನೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಕೇಂದ್ರವು ರಾಜ್ಯ ಸರ್ಕಾರಕ್ಕೆ ಎಲ್ಲ ಸಹಾಯವನ್ನೂ ನೀಡುತ್ತಿದೆ ಎಂದು ತಿಳಿಸಿದರು. ಬಳಿಕ ಭಾವುಕರಾದ ಮೋದಿ ನಾನೀಗ ಏಕ್ತಾ ನಗರದಲ್ಲಿ ಇದ್ದೇನೆ. ಆದರೆ, ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ. ಇಂತಹ ದುರ್ಘಟನೆ ನನ್ನ ಜೀವನದಲ್ಲಿ ಕೆಲವು ಬಂದಿವೆ. ಆದರೆ ಕೆಲವು ಕರ್ತವ್ಯಗಳು ನಾನು ನಿಭಾಯಿಸಲೇಬೇಕಾಗಿದೆ ಎಂದಿದ್ದಾರೆ.