ಮುಂಬೈ: ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟಿದ್ದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ನವೆಂಬರ್ 2 ರಂದು ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನವೆಂಬರ್ 4 ಮತ್ತು 5 ರಂದು ಶಿರಡಿಯಲ್ಲಿ ನಡೆಯಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಶರದ್ ಪವಾರ್ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸಚಿವರಾಗಿಯೂ ಶರದ್ ಪವಾರ್ ಕಾರ್ಯನಿರ್ವಹಿಸಿದ್ದಾರೆ.