ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಇಂದು ಮೊರ್ಬಿ ತೂಗುಸೇತುವೆ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಇನ್ನು ಈ ವೇಳೆ ಪ್ರಧಾನಿ ಮೋದಿಯವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉಪಸ್ಥಿತರಿದ್ದು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ಬಳಿಕ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೋದಿ ಭಾಗಿಯಾದರು.
ಭಾನುವಾರ ಮೊರ್ಬಿ ಪಟ್ಟಣದಲ್ಲಿ ತೂಗು ಸೇತುವೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 141 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.