ಕೊರೋನಾ ನಿರ್ವಹಣೆಗೆ ಕೇಂದ್ರ ಬಹಳ ದುಡ್ಡು ಕೊಟ್ಟಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಭಾಗವಾಗಿ ಕೇಂದ್ರ ಸರ್ಕಾರದ ಸಹಾಯದೊಂದಿಗೆ ರಾಜ್ಯದಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಇದು ಜಗತ್ತಿನಲ್ಲೇ ಅತ್ಯಂತ ದೊಡ್ಡ ಲಸಿಕಾ ಅಭಿಯಾನ. ಇದರ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶನಿವಾರ ಉಚಿತ ಬೂಸ್ಟರ್ ಡೋಸ್ ನೀಡುವ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಕೊರೊನಾ ನಿರ್ವಹಣೆಗೆ ಬಹಳ ದುಡ್ಡು ಕೊಟ್ಟಿದೆ. ಕೇಂದ್ರ ಹಣ ಕೊಟ್ಟಿಲ್ಲ ಅಂದಿದ್ರೆ ಇವತ್ತು ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ಬೀಳುತ್ತಿತ್ತು. ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಪಾತ್ರವಹಿಸಿದೆ ಎಂದು ಹೇಳಿದರು. ಕೊರೊನಾ ಕಡಿಮೆ ಆಗಿ ಆಗುತ್ತಿದೆ ಆದರೆ ಈ ವೇಳೆಯಲ್ಲೂ ನಾವು ನಿರ್ಲಕ್ಷವಹಿಸದೇ ಕಾಳಜಿ ತೆಗೆದುಕೊಳ್ಳಬೇಕಿದೆ ಎಂದರು.

Leave a Reply

Your email address will not be published. Required fields are marked *