ಬಾಂಗ್ಲಾ ವಿರುದ್ಧ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ

ಬಾಂಗ್ಲಾದೇಶ ಎದುರು ಟೀಂ ಇಂಡಿಯಾ 5 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸೂಪರ್ 12 ಹಂತದ ಗ್ರೂಪ್ 2 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದ್ದು ಸೆಮೀಸ್‌ಗೆ ಮತ್ತಷ್ಟು ಹತ್ತಿರವಾಗಿದೆ.

ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್-2022 ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ ಐದು ರನ್‌ಗಳಿಂದ ಸೋಲಿಸಿತು. ಈ ಮೂಲಕ ಸೆಮಿಫೈನಲ್‌ಗೆ ಹೋಗುವ ಆಸೆಯನ್ನು ರೋಹಿತ್ ಪಡೆ ಬಲಗೊಳಿಸಿಕೊಂಡಿದೆ.