ಕಾಳಿ ನದಿಗೆ ಈಜಲು ಹೊಗಿದ್ದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು ಎಳೆದೊಯ್ದ ಘಟನೆ ದಾಂಡೇಲಿ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ.

ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ ಎರಡು ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ. ಇದನ್ನು ಸ್ಥಳೀಯ ಜನರು ನೋಡಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಇದೀಗ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆದಿದೆ.