ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊಸಾ ಪ್ಲಾನ್ ಮಾಡಿದ್ದು ಧ್ಯಾನ ಯೋಗದ ಮೊರೆ ಹೋಗಿದೆ. ಹೌದು.! ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಸಲು, ಸದ್ವಿಚಾರ ಚಿಂತನೆ, ಒತ್ತಡಗಳಿಂದ ಮುಕ್ತವಾಗಿ ಜ್ಞಾನಾರ್ಜನೆ ಮಾಡಲು ಬೇಕಾದಂತಹ ಪೂರಕ ವಾತಾವರಣ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ.
ಉತ್ತಮ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳು & ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿಗಳು ಧ್ಯಾನ ಮಾಡುವಂತೆ ಸೂಚಿಸಿ ಆದೇಶ ಹೊರಡಿಸಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಹೀಗಾಗಿ ಸಚಿವರು ಈ ಸೂಚನೆ ನೀಡಿದ್ದು, ಶೀಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.