ತುಮಕೂರು: ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ಬಳಿಕ ಕೊನೆಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಸರ್ಕಾರ ಇದೀಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದೆ.
- ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ.
- ರೋಗಿಯು ಯಾವುದೇ ದಾಖಲೆಯು, ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು.
- ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.
- ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು.
- ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.
- ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು.
ಈ ಎಲ್ಲಾ ವಿಷಯಗಳನ್ನು ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಇಂತಹ ಘಟನೆ ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗತ್ತೆ. ಹಾಗೂ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.