ಬೆಂಗಳೂರು: ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗ ಚಂದ್ರಶೇಖರ್ ಸಾವಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ನಡೆಸಲು ಸರ್ಕಾರಕ್ಕೆ ಸಿದ್ದು ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸಿಎಂ ಅವರನ್ನು ಒತ್ತಾಯಿಸುತ್ತೇನೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.