ಗುಜರಾತ್: ದೇಶಾದ್ಯಂತ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಡಿ. 5 ರ ಸಂಜೆ ಪ್ರಕಟವಾದ ಎಕ್ಸಿಟ್ ಪೋಲ್ ಸರ್ವೆಯಲ್ಲಿ ಬಿಜೆಪಿ 117 – 140 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಬಿಜೆಪಿಗೆ 2022 ರ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಬಹುಮತ ಲಭಿಸಲಿದೆ ಎಂದು ಹೇಳಿದೆ.
ಅಲ್ಲದೆ, ಕಾಂಗ್ರೆಸ್ ಪಕ್ಷಕ್ಕೆ 34 – 51 ಹಾಗೂ ಎಎಪಿಗೆ ಕೇವಲ 6 ರಿಂದ 13 ಸ್ಥಾನಗಳು ಸಿಗಲಿದೆ. ಹಾಗೂ, ಇತರರಿಗೆ ಶೂನ್ಯ ಸ್ಥಾನ ಎಂದು ಜನ್ ಕೀ ಬಾತ್ ಚುನಾವಣೋತ್ತರ ಸಮೀಕ್ಷೆ ಹೇಳುತ್ತದೆ.