ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಸ್ಪಷ್ಟ ಬಹುಮತ ಪಡೆದಿದೆ. ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಲಿದ್ದು, ಎಎಪಿ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
ಎಎಪಿ 126 ಸ್ಥಾನಗಳನ್ನು ಗೆದ್ದಿದೆ, ಬಿಜೆಪಿ 97 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 7 ಸ್ಥಾನಗಳನ್ನು ಗಳಿಸಿದ್ದು, 3 ರಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 3 ರಲ್ಲಿ ಗೆಲುವು ಸಾಧಿಸಿದ್ದಾರೆ.