ಗುಜರಾತ್​ನಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ.! ಹಿಮಾಚಲ ಪ್ರದೇಶದಲ್ಲಿ ಅತಂತ್ರ.!

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಗುಜರಾತ್ ನಲ್ಲಿ ಬಿಜೆಪಿಯು ದಾಖಲೆಯ 150 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನೂ ಕಾಂಗ್ರೆಸ್-16, ಆಮ್ ಆದ್ಮಿ ಪಕ್ಷ- 7, ಇತರೆ- 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ ಅತಂತ್ರ ಪರಿಸ್ಥಿತಿ ಉಂಟಾಗಿದ್ದು, ಬಿಜೆಪಿ- 30 ಕಾಂಗ್ರೆಸ್-33 ಇತರೆ- 5 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.