ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 7 ನೇ ಬಾರಿಗೆ ಅಧಿಕಾರ ರಚಿಸುವುದು ಖಚಿತವಾಗಿದ್ದು, ಡಿ. 12 ರಂದು ಭುಪೇಂದ್ರ ಪಟೇಲ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12-2 ಗಂಟೆವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ ಮಾದಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಕಳೆದ ವರ್ಷ ಸೆ. 12 ರಲ್ಲಿ ಮೊದಲ ಬಾರಿಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಏಳನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದ ಚಿಕ್ಕಾಣಿ ಹಿಡಿಯುತ್ತಿದ್ದು, ಭೂಪೇಂದ್ರ ಪಟೇಲ್ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಿ.ಆರ್. ಪಾಟೀಲ್ ಸುದ್ದಿಗೋಷ್ಛಿಯಲ್ಲಿ ತಿಳಿಸಿದ್ದಾರೆ. ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ ಕ್ರಾಸ್ ಮಾಡಿದೆ. ಬರೋಬ್ಬರಿ 158 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ.