ಬೆಂಗಳೂರು: ಡಿ. 15 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು, ಇನ್ನೂ ಐದು ದಿನಗಳ ಕಾಲ ಚಳಿ, ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ತಿಳಿಸಿದ್ದಾರೆ.
ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದೆ. ಇದರಿಂದ ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಡಿ.13 ರಂದು ಕಾರಾವಳಿ ಭಾಗದಲ್ಲಿ ಹಲವು ಕಡೆ ಹಗುರ ಮಳೆಯಾಗಿದೆ ಎಂದರು.