ವೋಟರ್ ಐಡಿಗೆ ಆಧಾರ್ ಸಂಖ್ಯೆ ಜೋಡಿಸದಿದ್ದರೂ ಮತದಾನಕ್ಕೆ ಅವಕಾಶ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡದವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮತದಾರರ ಗುರುತಿಗಾಗಿ ಅವರಿಂದ ಆಧಾರ್‌ ಸಂಖ್ಯೆ ಪಡೆಯಲು 2021 ರ ಚುನಾವಣಾ ಕಾನೂನುಗಳ ಕಾಯ್ದೆಯು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಗೆ ತಿಳಿಸಿದ್ದಾರೆ. 95 ಕೋಟಿ ಮತದಾರರ ಪೈಕಿ 54 ಕೋಟಿಗಿಂತಲೂ ಅಧಿಕ ಮತದಾರರು ತಮ್ಮ ಆಧಾರ್‌ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಲು ಒಪ್ಪಿದ್ದಾರೆ ಎಂದು ಸಚಿವರು ಹೇಳಿದ್ದಾರೆ.