ನವದೆಹಲಿ: ನೆರೆಯ ರಾಷ್ಟ್ರ ಚೀನಾದಲ್ಲಿ ಕೋವಿಡ್ ಉಲ್ಬಣಗೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾರತದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು 2 ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಚಿವರು ಮತ್ತು ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.
ಒಮಿಕ್ರಾನ್ ಉಪತಳಿ BF.7 ನ ನಾಲ್ಕು ಪ್ರಕರಣಗಳು ದೇಶದಲ್ಲಿ ದೃಢಪಟ್ಟ ನಂತರ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಗುಜರಾತ್ ಮತ್ತು ಒಡಿಶಾದಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಬಳಿಕ ಮೋದಿ ನೇತೃತ್ವದ ಸಭೆಯಲ್ಲಿ ಕೇಂದ್ರ ಸರ್ಕಾರ ಕಿಕ್ಕಿರಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಒತ್ತಾಯಿಸಿದೆ. ಅದೇ ವೇಳೆ ಪರೀಕ್ಷೆಯನ್ನು ಮತ್ತು ಜೀನೋಮಿಕ್ ಅನುಕ್ರಮವನ್ನು ಸಹ ಹೆಚ್ಚಿಸಲು ಸಲಹೆ ನೀಡಿದೆ.