ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರನಾದ ಸ್ಯಾಮ್ ಕರ್ರನ್.! 18.50 ಕೋಟಿ ರುಪಾಯಿಗೆ ಪಂಜಾಬ್ ಕಿಂಗ್ಸ್ ಪಾಲು.!

ಕೊಚ್ಚಿ: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರನಾಗಿ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್‌ ಕರ್ರನ್ ಹೊರಹೊಮ್ಮಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಹಾಗೂ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದ್ದ ಸ್ಯಾಮ್ ಕರ್ರನ್ ನನ್ನು ಪಂಜಾಬ್ ಕಿಂಗ್ಸ್‌ ತಂಡವು 18.50 ಕೋಟಿ ರುಪಾಯಿ ನೀಡಿ ಖರೀದಿಸಿದೆ.

ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಪಂಜಾಬ್ ಕಿಂಗ್ಸ್‌ ಫ್ರಾಂಚೈಸಿಯು, ದಾಖಲೆಯ ಮೊತ್ತಕ್ಕೆ ಸ್ಯಾಮ್ ಕರ್ರನ್ ಖರೀದಿಸುವುದರ ಜತೆಗೆ ಜಿಂಬಾಬ್ವೆಯ ತಾರಾ ಆಲ್ರೌಂಡರ್ ಸಿಕಂದರ್ ರಾಜಾನನ್ನು ಮೂಲ ಬೆಲೆಗೆ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.