ಬೆಂಗಳೂರು: ಚೀನಾದ ಕೊರೊನಾ ರೂಪಾಂತರಿ BF7 ಭೀತಿ ಹಿನ್ನೆಲೆ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.
ಡಿ. 25 ರಂದು ಚೀನಾದಿಂದ ಬಂದಿರುವ 35 ವರ್ಷದ ವ್ಯಕ್ತಿಯನ್ನ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಟೆಸ್ಟ್ ವೇಳೆ ಕೊರೊನಾ ಪಾಸಿಟಿವ್ ಬಂದಿದ್ದು, ಕೂಡಲೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್ಗೆ ಒಳಪಡಿಸಲಾಗಿದೆ.
ಸೋಂಕಿತ ವ್ಯಕ್ತಿಯಲ್ಲಿ ಇರುವುದು BF7ನಾ ಅಥವಾ ನಾರ್ಮಲ್ ಕೊರೊನಾ ಎಂದು ತಿಳಿದುಕೊಳ್ಳಲು ಸ್ಯಾಂಪಲ್ಸ್ ಅನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ರವಾನೆ ಮಾಡಲಾಗಿದೆ.
ಕಳೆದ ಮೂರು ದಿನಗಳಲ್ಲಿ ವಿದೇಶಗಳಿಂದ ಬಂದ 9 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ಐವರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಉಳಿದ ನಾಲ್ವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.