ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿರುವ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಅಗ್ನಿ ದುರಂತ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದ್ದು, ಗಾಯಗೊಂಡ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಚಿವರು ಮಾಹಿತಿ ನೀಡಿದ್ದು, ಮೃತ ಕಾರ್ಮಿಕರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿರುವುದಾಗಿ ಅಮರನಾಥ್ ಅವರು ತಿಳಿಸಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಕಾರ್ಮಿಕನಿಗೆ ವೈದ್ಯಕೀಯ ನೆರವು ನೀಡುವಂತೆ ಸಚಿವ ಅಮರನಾಥ್ ವೈದ್ಯಕೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.