ಜಮ್ಮು ಕಾಶ್ಮೀರ: ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದರು ಎಂದು ಎಜಿಡಿಪಿ ಮುಕೇಶ್ ಸಿಂಗ್ ಹೇಳಿದ್ದಾರೆ.
ಅಲ್ಲದೇ ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಇದರಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.