ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ ಹುಟ್ಟುಹಬ್ಬ.!

ನವದೆಹಲಿ: ಭಾರತೀಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ 85 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರು ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ನೇವಲ್ ಟಾಟಾ ಮತ್ತು ಸೂನಿ ಟಾಟಾ ದಂಪತಿಗೆ ಜನಿಸಿದರು.

ರತನ್ ಟಾಟಾ 1959 ರಲ್ಲಿ ಆರ್ಕಿಟೆಕ್ಚರ್ ಮತ್ತು ಸ್ಟ್ರಕ್ಚರಲ್ ಇಂಜಿನಿಯರಿಂಗ್ ಅನ್ನು ಅಧ್ಯಯನ ಮಾಡಲು ಕಾರ್ನೆಲ್ ವಿಶ್ವವಿದ್ಯಾಲಯಕ್ಕೆ ಹೋದರು. ರತನ್ ಟಾಟಾ ಅವರು 1959 ರಲ್ಲಿ ಟಾಟಾ ಗ್ರೂಪ್‌ಗೆ ಸೇರಿದರು. 1975 ರಲ್ಲಿ ಅವರು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡಿದರು. ರತನ್ ಟಾಟಾ 1991 ರಲ್ಲಿ ಟಾಟಾ ಗ್ರೂಪ್‌ನ ಅಧ್ಯಕ್ಷರಾದರು.  

ಇವರ ಹುಟ್ಟುಹಬ್ಬಕ್ಕೆ ಅನೇಕ ಗಣ್ಯರು, ರಾಜಕೀಯ ನಾಯಕರು, ಉದ್ಯಮಿಗಳು, ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.