ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹ್ಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
100 ವರ್ಷ ವಯಸ್ಸಿನ ಹೀರಾಬೆನ್ ವಯೋಸಹಜವಾದ ಕೆಲವು ಕಾಯಿಲೆಗಳಿಗೆ ಒಳಗಾಗಿದ್ದು, ಸದ್ಯ ಅವರ ಪರಿಸ್ಥಿತಿ ತುಸು ಗಂಭೀರವಾಗಿಯೇ ಇದೆ ಎಂದೂ ಹೇಳಲಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರು ಹೀರಾಬೆನ್ ದಾಖಲಾಗಿರುವ ಆಸ್ಪತ್ರೆಗೆ ಭೇಟಿಕೊಟ್ಟಿದ್ದಾರೆ.