ಗುಜರಾತ್: ನವಸಾರಿಯಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಈ ಅಪಘಾತದಲ್ಲಿ ಗಾಯಗೊಂಡ 32 ಮಂದಿಯಲ್ಲಿ 17 ಜನರನ್ನು ವಲ್ಸಾದ್‌ನ ಆಸ್ಪತ್ರೆಗೆ, 14 ಮಂದಿಯನ್ನು ನವಸಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಇನ್ನೊಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸೂರತ್‌ಗೆ ಕರೆದೊಯ್ಯಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೇತನ್ ಜೋಶಿ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಮೃತಪಟ್ಟ 9 ಜನರ ಶವಗಳನ್ನು ಪೊಲೀಸ್ ತಂಡಗಳು ಹೊರತೆಗೆದು ಶವಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.
ಎಸ್‌ಯುವಿಯಲ್ಲಿ ಅಂಕಲೇಶ್ವರದ ಸಂಸ್ಥೆಯೊಂದರ 9 ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಬಸ್ ಅಹಮದಾಬಾದ್‌ನಿಂದ ವಲ್ಸಾದ್‌ಗೆ ಜನರನ್ನು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.