ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳುತ್ತಿದ್ದ ವಾಹನ ಅಪಘಾತ: 6 ಮಂದಿ ಸಾವು

ಬೆಳಗಾವಿ: ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳುತ್ತಿರುವ ಭಕ್ತರ ವಾಹನ ಭೀಕರ ಅಪಘಾತಕ್ಕೆ ಒಳಗಾಗಿ 6 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಚುಂಚನೂರು ಬಳಿ ನಡೆದಿದೆ. ಮಹೇಂದ್ರ ಗೂಡ್ಸ್ ವಾಹನ ಆಲದ ಮರಕ್ಕೆ ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ. ಹನಮ್ಮವ್ವ (24), ದೀಪಾ (31), ಸವಿತಾ (12), ಸುಪ್ರೀತಾ (11), ಮಾರುತಿ (42), ಇಂದ್ರವ್ವಾ (24) ಮೃತ ದುರ್ದೈವಿಗಳು.

ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದಿದ್ದಾರೆ.