ಅದ್ಧೂರಿಯಾಗಿ ಚಾಲನೆಗೊಂಡ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ.!

ಹಾವೇರಿ: ಜ. 6 ರಿಂದ ಮೂರು ದಿನಗಳ ಕಾಲ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಅದ್ಧೂರಿ ಚಾಲನೆ ನೀಡಲಾಯಿತು.

130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಪ್ರಧಾನ ವೇದಿಕೆಯ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಾಯಿತು.

ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌. ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌. ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.