ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ಡಾ. ಮಹೇಶ್ ಜೋಷಿ

ಹಾವೇರಿ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯದಲ್ಲಿ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಷಿ ತಿಳಿಸಿದ್ದಾರೆ.

86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಮುಂದಿನ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಚರ್ಚೆ ಆಯ್ತು. ಬೆಂ.ಗ್ರಾಮಾಂತರ, ಬೆಳಗಾವಿ , ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ಒಟ್ಟು 9 ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ನಡೆಸುವ ಬೇಡಿಕೆ ಇಟ್ಟಿದ್ದವು. 

ಒಟ್ಟು 46 ಮತದಾರರು ತಮ್ಮ ಮತ ಚಲಾವಣೆ ಮಾಡಿದ್ದು, 17 ಮತಗಳು ಮಂಡ್ಯ ಜಿಲ್ಲೆಗೆ ಬಂದಿದೆ. ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದವು. ಉತ್ತರ ಕನ್ನಡ ಜಿಲ್ಲೆಗೆ ಒಂದೂ ಮತ ಬರಲಿಲ್ಲ. ಆದ್ದರಿಂದ ಅತಿ ಹೆಚ್ಚು ಮತ ಪಡೆದ ಮಂಡ್ಯ ಜಿಲ್ಲೆಯಲ್ಲಿ ಮುಂದಿನ ಅಖಿಲ ಭಾರತ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಮುಂದಿನ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದ್ದು, ಉಳಿದ ಕೆಲವು ಅಂಶಗಳನ್ನು ಬಹಿರಂಗ ಸಭೆಯಲ್ಲಿ ಹೇಳುವುದಾಗಿ ಮಹೇಶ್ ಜೋಷಿ ತಿಳಿಸಿದ್ದಾರೆ.