ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಜನ ಹೃದಯಾಘಾತದಿಂದ ಸಾವು.!

ಉತ್ತರ ಪ್ರದೇಶ: ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ.

723 ಹೃದ್ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 98 ಜನರು ಮೃತಪಟ್ಟಿದ್ದಾರೆ. ಇವರಲ್ಲಿ 44 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟರೆ, 54 ಜನರು ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಸಾವನ್ನಪ್ಪಿದ್ದಾರೆ. ಇನ್ನೂ ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ವಯೋಮಾನದ  ಜನರು ಮುನೆಚ್ಚರಿಕೆವಹಿಸಿಬೇಕೆಂದು ಹೃದ್ರೋಗ ವಿಭಾಗದ ನಿರ್ದೇಶಕ ವಿನಯ್ ಕೃಷ್ಣ ತಿಳಿಸಿದ್ದಾರೆ.