ದಾಂಡೇಲಿ: ಅಂಬಿಕಾನಗರ ವ್ಯಾಪ್ತಿಯ ಬೊಮ್ಮನಹಳ್ಳಿ ಜಲಾಶಯದಿಂದ ಶನಿವಾರ ಬೆಳಗ್ಗೆ 10 ಘಂಟೆಗೆ ಕ್ರಸ್ಟ್ ಗೇಟ್ ನಂ 5 ಮತ್ತು 3 ರಿಂದ ತಲಾ 1500 ರಂತೆ ಒಟ್ಟು 3000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನದಿತಟದಲ್ಲಿ ಬರುವ ಗ್ರಾಮಗಳ ಜನ, ಜಾನುವಾರುಗಳ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.