ನವದೆಹಲಿ: ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಈ ವರ್ಷ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಕೇಂದ್ರದ ಈ ನಿರ್ಧಾರಕ್ಕೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೊನೆ ಕ್ಷಣದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ದೊರಕಿದೆ.
14 ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಮಿತಿ ಅವಕಾಶ ನೀಡಿದೆ.
ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ರಾಜ್ಯ ‘ನಾರಿ ಶಕ್ತಿ’ ಕಲ್ಪನೆಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ ಮೂವರು ಮಹಿಳಾ ಸಾಧಕಿಯರ ಬಗ್ಗೆ ಸ್ತಬ್ಧಚಿತ್ರ ತಯಾರಾಗಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಸ್ಥಬ್ದ ಚಿತ್ರದಲ್ಲಿ ಅನಾವರಣಗೊಳ್ಳಲಿದೆ.