ಹುಬ್ಬಳ್ಳಿ: ಭಾರತ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವುದರಿಂದ ಯುವ ಸಮುದಾಯಕ್ಕೆ ಸಾಧನೆ ಮಾಡಲು ಇದು ಸಕಾಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರಿಗಾಗಿ ಕಳೆದ 8 ವರ್ಷಗಳಲ್ಲಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಯುವ ಸಮುದಾಯಕ್ಕಾಗಿ ಭವ್ಯ ಭವಿಷ್ಯವನ್ನು ನಾವು ರೂಪಿಸಿದ್ದೇವೆ. ಯುವಕರಿಗೆ ರನ್ವೇ ಸಿದ್ದವಾಗಿದೆ, ನೀವು ಟೇಕಾಫ್ ಆಗುವುದೊಂದೇ ಬಾಕಿ ಎಂದರು.
ಭಾರತವು ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಸಾಧನೆಯನ್ನು ಮಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ಯುವ ಶಕ್ತಿ. ಭಾರತದಲ್ಲಿ ಯುವಕರ ದೊಡ್ಡ ಪಡೆ ಇರುವುದರಿಂದ ನಾವು ಜಾಗತಿಕವಾಗಿ ದೊಡ್ಡ ಶಕ್ತಿಯಾಗಿ ಬೆಳೆಯುತ್ತಿದ್ದೇವೆ ಎಂದು ಮೋದಿ ಹೇಳಿದರು.