ಶಿರಸಿ: ಸಾರಿಗೆ ಸಂಸ್ಥೆ ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಹೆಗಡೆಕಟ್ಟಾ ಮುಖ್ಯ ರಸ್ತೆಯ ಕಲ್ಮನೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಹೆಗಡೆಕಟ್ಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ಗೆ ಶಿರಸಿಯಿಂದ ಹೆಗಡೆಕಟ್ಟಾ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೋಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಚಾಲಕ ಪಾರಾಗಿದ್ದಾನೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.