ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೆಪಿ ನಡ್ಡಾ ಅವರ ವಿಸ್ತರಣೆಯ ಪ್ರಸ್ತಾಪವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಡಿಸಿದರು. ಅಲ್ಲದೇ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ ಮೂಲಗಳು ತಿಳಿಸಿದೆ. ಜೆಪಿ ನಡ್ಡಾ ಅವರು ಜೂನ್ 2019 ರಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.