ಕಲಬುರಗಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಯಾದಗಿರಿ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೇಕಲ್ ಗೆ ಪ್ರಯಾಣ ಬೆಳೆಸಿದ್ದಾರೆ.
ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ದೆಹಲಿಯಿಂದ ವಾಯುಪಡೆಯ ವಿಶೇಷ ವಿಮಾನದ ಮೂಲಕ 10.50 ಕ್ಕೆ ಬಂದ ಪ್ರಧಾನಿ ಹೆಲಿಕಾಪ್ಟರ್ ಮೂಲಕ ಕೊಡೇಕಲ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸಹೋದ್ಯೋಗಿಗಳು ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು.