ನವದೆಹಲಿ: ನವೆಂಬರ್ 26 ರಂದು ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ ಪ್ರಕರಣದಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ ಕರ್ತವ್ಯ ಲೋಪಕ್ಕೆ ಪೈಲಟ್ ಅವರನ್ನು ಮೂರು ತಿಂಗಳವರೆಗೆ ಅಮಾನತು ಮಾಡಲಾಗಿದೆ.
ಈ ಪ್ರಕರಣದಲ್ಲಿ ಏರ್ ಇಂಡಿಯಾದ ವಿಮಾನಯಾನ ಸೇವೆಗಳ ನಿರ್ದೇಶಕರ ಮೇಲೂ 3 ಲಕ್ಷ ರೂ. ದಂಡ ವಿಧಿಸಲಾಗಿದೆ. ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಈ ಘಟನೆ ನಡೆದಿತ್ತು. ಕುಡಿತದ ಮತ್ತಿನಲ್ಲಿದ್ದ ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ, ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ.