ಬೈಕಿಗೆ ಟಿಪ್ಪರ್ ಡಿಕ್ಕಿ: ಕಾಲೇಜು ವಿದ್ಯಾರ್ಥಿನಿ ಸಾವು

ಬೆಂಗಳೂರು: ಬೈಕಿಗೆ ಟಿಪ್ಪರ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಸರಿತಾ (21) ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಅನಿತಾ (20) ಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ ಡಿಗ್ರಿ ಕಾಲೇಜಿನಲ್ಲಿ ಈ ಇಬ್ಬರು ವಿದ್ಯಾರ್ಥಿನಿಯರು ಓದುತ್ತಿದ್ದರು. ಇನ್ನು ಸರಿತಾ ಎಂಬಾಕೆಗೆ 6 ತಿಂಗಳ ಹಿಂದೆ ಮದುವೆಯಾಗಿದ್ದು, ವಿವಾಹದ ಬಳಿಕವು ಕಾಲೇಜಿಗೆ ಹೋಗುತ್ತಿದ್ದಳು.

ಇಬ್ಬರು ಒಟ್ಟಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ನೈಸ್ ರಸ್ತೆ ಬಳಿ ಟಿಪ್ಪರ್​ ಗುದ್ದಿದೆ. ಬಳಿಕ 10 ಮೀಟರ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ