ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ನೆನಪಿಗಾಗಿ ಜನವರಿ 23 ರಂದು ‘ಪರಾಕ್ರಮ್ ದಿವಸ್’ ಎಂದು ಗುರುತಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹೆಸರಿಲ್ಲದ 21 ದೊಡ್ಡ ದ್ವೀಪಗಳಿಗೆ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ.