ಮೈಸೂರು: ನಗರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಬದರಿ ನಾರಾಯಣ್ ಅವರು ಪ್ರಾಣಾಯಾಮ ಮಾಡುತ್ತಾ ಬರಿಗಣ್ಣಿನಲ್ಲಿ ಸೂರ್ಯನನ್ನು 42 ನಿಮಿಷಗಳ ಕಾಲ ನೋಡಿ ದಾಖಲೆ ಮಾಡಿದ್ದಾರೆ.
ಈ ಪ್ರಕ್ರಿಯೆಗೆ ‘ಸೂರ್ಯ ಕಿರಣ ಕ್ರಿಯೆ’ ಎಂದು ಹೇಳುತ್ತೇವೆ. ಬರಿಗಣ್ಣಿನಲ್ಲಿ ಸೂರ್ಯನನ್ನು ನೇರವಾಗಿ ನೋಡುವುದು ಅಪಾಯಕಾರಿ. ಆದರೆ, ನಿರಂತರ ಪ್ರಾಣಾಯಾಮದ ಜೊತೆಗಿನ ಅಭ್ಯಾಸದ ಮೂಲಕ ನಾನು ಈ ಸಾಧನೆ ಮಾಡಿದ್ದೇನೆ. ಹೀಗಾಗಿ ಇದನ್ನು ಯಾರೂ ಪ್ರಯತ್ನಿಸಬಾರದು ಎಂದು ಬದರಿ ಅವರು ವಿನಂತಿಸಿದ್ದಾರೆ.
ಬದರಿ ನಾರಾಯಣ್ ಮಲೇಷ್ಯಾ ಮತ್ತು ಒಮಾನ್ ಕಂಪನಿಗಳಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, 15 ವರ್ಷಗಳ ಹಿಂದೆ ಮೈಸೂರಿಗೆ ಮರಳಿದ್ದರು. ಅವರು ಪ್ಲಾಸ್ಟಿಕ್ ಪಿಇಟಿ ಬಾಟಲಿಗಳ ಜಾಗೃತಿ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಪಾರ್ಥೇನಿಯಂ ಸಸ್ಯಗಳನ್ನು ನಿರ್ಮೂಲನೆ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.