ಗಣರಾಜ್ಯೋತ್ಸವ ಪರೇಡ್ ಗೆ ರಾಷ್ಟ ರಾಜಧಾನಿ ಸಜ್ಜು.!

ನವದೆಹಲಿ: ದೇಶಾದ್ಯಂತ ಇಂದು 74 ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಸಂಭ್ರಮ ಮನೆಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30 ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಳಗ್ಗೆ 10.30 ಕ್ಕೆ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್​ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್​​​​ ಫತ್ತಾಹ್​ ಅಲ್ ಸಿಸಿ ಆಗಮಿಸಿದ್ದಾರೆ.