ಮೇ ೮ ರಿಂದ ೧೧ ರವರೆಗೆ ಮತಗಟ್ಟೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಕಾರವಾರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ರ ನಿಮಿತ್ತ ಮೇ
೧೦ ಮತದಾನ ಜರುಗಲಿದ್ದು
ಜಿಲ್ಲೆಯ ಒಟ್ಟು ೧೪೩೫ ಮತಗಟ್ಟೆ
ಕೇಂದ್ರಗಳ ಸುತ್ತಲಿನ ೨೦೦
ಮೀ ಪ್ರದೇಶದಲ್ಲಿ ಹಾಗೂ
ಜಿಲ್ಲೆಯಾದ್ಯಂತ ಚುನಾವಣಾ
ಪ್ರಕ್ರಿಯೆಗಳಿಗೆ ಅನ್ವಯಿಸುವಂತೆ
ಮಾತ್ರ ಮೇ ೮ ರಂದು ರಾತ್ರಿ
೧೦ ಗಂಟೆಯಿAದ ಮೇ ೧೧
ರ ಬೆಳಿಗ್ಗೆ ೬ ಗಂಟೆಯವರೆಗೆ
ಸಿ.ಆರ್.ಪಿ.ಸಿ. ೧೯೭೩ ರ ಕಲಂ ೧೪೪ ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು
ವಿಧಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ
ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಉದ್ದೇಶದ
ಹೊರತಾಗಿ ಹೆಚ್ಚು ಜನರು ಗುಂಪು ಸೇರುವುದು ನಿಷೇಧಿಸಿದೆ,
ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ,
ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ ಸಭೆ ನಡೆಸುವಂತಿಲ್ಲ. ಶಸ್ತ್ರ,
ಬಡಿಗೆ, ಬರ್ಚಿ , ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ ,
ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟ ಮಾಡಬಹುದಾದ
ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು
ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆಯ ೨೦೦ ಮೀಟರ್ ವ್ಯಾಪ್ತಿಯಲ್ಲಿ ಮತದಾರರಿಗೆ ಆಮಿಷ
ಒಡ್ಡಿ ಅಭ್ಯರ್ಥಿಯ ಪರ ಮತಯಾಚಿಸುವುದನ್ನು ನಿರ್ಬಂಧಿಸಲಾಗಿದೆ.
ಮತದಾನ ದಿನದಂದು ಮತಗಟ್ಟೆಗಳ ಸುತ್ತ ೨೦೦ ಮೀಟರ್ ಒಳಗೆ
ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.
ಕಲ್ಲು, ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು
ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು
ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು
ಎಸೆಯುವಂತಹ, ವಸ್ತುಗಳನ್ನು ಎಳೆಯುವ ಅಥವಾ ಬಿಡುವ
ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಮನುಷ್ಯ
ಶವಗಳ ಅಥವಾ ಅವುಗಳ ಅಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ,
ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ
ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನಿ ಕೊಡುವುದು,
ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ
ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು
ಮಾಡುವುದನ್ನು ನಿಷೇಧಿಸಲಾಗಿದೆ, ಸಾರ್ವಜನಿಕವಾಗಿ ಯಾವುದೇ
ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ
ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ
ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು
ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ
ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ
ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು
ನಿಷೇಧಿಸಲಾಗಿದೆ.
ಮತದಾನದ ದಿನದಂದು ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್,
ಇನ್ನಿತರ ಎಲೆಕ್ಟ್ರಾನಿಕ್ಸ್, ಉಪಕರಣಗಳನ್ನು ತೆಗೆದುಕೊಂಡು
ಹೋಗುವುದನ್ನು ನಿಷೇಧಿಸಲಾಗಿದೆ (ಚುನಾವಣಾ ಕಾರ್ಯದಲ್ಲಿ
ನಿರತರಾದ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ), ಮತದಾನ
ದಿನದಂದು ಮತಗಟ್ಟೆಗಳ ಸುತ್ತ ೨೦೦ ಮೀಟರ್ ಪರಿಮಿತಿಯಲ್ಲಿ
ಪ್ರಚಾರಕ್ಕೆ ಸಂಬAಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ
ವಸ್ತುಗಳನ್ನು ಬಳಸುವಂತಿಲ್ಲ, ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು
ಕೂಡ ಬಳಸುವಂತಿಲ್ಲ.
ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ
ಸAಹಿತೆಯ ೧೮೮ ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು
ಜಿಲ್ಲಾಧಿಕಾರಿ ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.