ಇಸ್ಲಾಮಾಬಾದ್: ಶಾರ್ಜಾ-ಹೈದರಾಬಾದ್ ನಡುವಿನ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಪರೀಕ್ಷೆ ನಡೆಸಲಾಗುತ್ತಿದೆ. ಇದೀಗ ಕರಾಚಿಯಿಂದ ಹೈದರಾಬಾದ್‌ಗೆ ಹಿಂದಿರುಗಲು ಮತ್ತೊಂದು ವಿಮಾನವನ್ನು ಕಳುಹಿಸಲಾಗುತ್ತಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ತಿಳಿಸಿದೆ. ಕಳೆದ ಎರಡು ವಾರಗಳಲ್ಲಿ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಎರಡನೇ ಭಾರತೀಯ ವಿಮಾನ ಇದಾಗಿದೆ.