ಕಾಂಗ್ರೇಸ್‌ ಮತ್ತೋಬ್ಬರ ಭಾವನೆಗಳಿಗೆ ಧಕ್ಕೆ ಬರೋ ತರುವ ಕೆಲಸ ಮಾಡ್ತಿದೆ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಕಾಂಗ್ರೆಸ್ ವರ್ತನೆ ಮಾಡುತ್ತಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹುಬ್ಬಳ್ಳಿ ನಗರದ ಆದರ್ಶನಗರದಲ್ಲಿನ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.

ಬಜರಂಗದಳ ವಿಚಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಎತ್ತಿದ ಪ್ರಶ್ನೆಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಬಜರಂಗ ದಳಕ್ಕಿದೆ. ಇದನ್ನು ಕಾಂಗ್ರೆಸ್‌ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ. ಇದೊಂದು ಪಾಲಾಯನವಾದ ಇದ್ದಂತೆ. ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಅವರ ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ ಎಂದರು.

ಅನವಶ್ಯಕವಾಗಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆ ಕೆರಳಿಸೋದು ಸರಿಯಲ್ಲ ಎಂದ ಅವರು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತದೆ. ಕಾಂಗ್ರೆಸ್ ಪಕ್ಷ ಇಂದು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪೀಪಲ್ಸ್ ಫ್ರಂಟ್ ಆಫ್ ಇಂಡಿಯಾ ಕಪಿಮುಷ್ಟಿಯಲ್ಲಿದೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ನಿಷೇಧ ಮಾಡ್ತಿವಿ ಅಂದ್ರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತೆ ಎಂದರು.