ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದ ಈಶ್ವರಪ್ಪ


ಕಲಬುರಗಿ: ಕಾಂಗ್ರೆಸ್ಗೆ ಗೊತ್ತಿಲ್ಲ, ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಬಜರಂದ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಇದರಿಂದ ವ್ಯಾಪಕರ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಈಶ್ವರಪ್ಪ, ಕಾಂಗ್ರೆಸ್ ಪ್ರಣಾಕೆ ಪ್ರತಿಗೆ ಬೆಂಕಿ ಹಚ್ಚಿದ್ದಾರೆ.

                            ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕೆಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ನ ಪ್ರಣಾಳಿಕೆಯ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ PFI ಮೇಲಿದ್ದ 173 ಪ್ರಕರಣ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್ ಸರ್ಕಾರ PFI ಮೇಲಿದ್ದ 173 ಪ್ರಕರಣ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಮಾಡಿದೆ. ಆಂಜನೇಯನ ಬಾಲಕ್ಕೆ ರಾವಣ ಬೆಂಕಿಯಿಟ್ಟ. ಆ ರಾವಣನ ಅಧಿಕಾರವೇ ನಾಶವಾಯ್ತು. ಇದೀಗ ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು. ಭಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದರು.