ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಸೇನೆಯ ಮೂರು ಅಧಿಕಾರಿಗಳು ಇದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅವರನ್ನು ಸಂಪರ್ಕಿಸಲು ಇನ್ನೂ ಸಾಧ್ಯವಾಗಿಲ್ಲ.
ಈ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಕಿಶ್ತ್ವಾರ್‌ನ ಅತ್ಯಂತ ದೂರದ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ಮಳೆಯಾಗುತ್ತಿದೆ.
ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್ನಲ್ಲಿ ಹೋಗುತ್ತಿದ್ದು, ಈ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದಾರೆ, ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ.